Labour Card Scholarship:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಸ್ನೇಹಿತರೆ ತುಂಬಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಹಾಗೂ ತಮ್ಮ ಶಿಕ್ಷಣ ವೆಚ್ಚ ಭರಿಸಲು ಈ ವಿದ್ಯಾರ್ಥಿ ವೇತನಗಳು ತುಂಬಾ ಸಹಾಯವಾಗುತ್ತವೆ ಎಂದು ಹೇಳಬಹುದು ಆದ್ದರಿಂದ ನಮ್ಮ ರಾಜ್ಯ ಸರ್ಕಾರ ಜಾರಿಗೆ ಕಟ್ಟಡ ಕಾರ್ಮಿಕ ವಿದ್ಯಾರ್ಥಿ ವೇತನ ಅಥವಾ ಲೇಬರ್ಸ್ ಕಾರ್ಡ್ ಸ್ಕಾಲರ್ಶಿಪ್ ಜಾರಿಗೆ ತಂದಿದೆ ಹಾಗಾಗಿ ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ತಮ್ಮ ವಿದ್ಯಾಭ್ಯಾಸಕ್ಕಾಗಿ ಹಣ ಸಹಾಯ ಪಡೆದುಕೊಳ್ಳಬಹುದು
ಹೌದು ಸ್ನೇಹಿತರೆ ನಮ್ಮ ಕರ್ನಾಟಕ ಸರ್ಕಾರ ಬಡ ಮಕ್ಕಳಿಗೆ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಕೂಲಿ ಮಾಡುತ್ತಿರುವಂತಹ ಜನರ ಮಕ್ಕಳಿಗೆ ಮತ್ತು ಕಟ್ಟಡ ಕಾರ್ಮಿಕ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ತಮ್ಮ ಶಿಕ್ಷಣಕ್ಕೆ ಬೇಕಾಗುವಂತ ವಸ್ತುಗಳ ಕರೆದಿಗೆ ಅಂದರೆ ಪುಸ್ತಕಗಳ ಕರೆದಿಗೆ ಹಾಗೂ ವಸತಿ ಮತ್ತು ಶಾಲಾ-ಕಾಲೇಜುಗಳ ಸುಂಕ ಬರಿಸಲು ಮುಂತಾದ ರೀತಿಯಲ್ಲಿ ಉಪಯೋಗವಾಗುವಂತೆ ಹಾಗೂ ಸರಕಾರ ಕಡೆಯಿಂದ ವಿದ್ಯಾರ್ಥಿಗಳು ಆರ್ಥಿಕ ಸಹಾಯ ಪಡೆಯುವ ನಿಟ್ಟಿನಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ
ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅಥವಾ ಕಟ್ಟಡ ಕೂಲಿ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಈ ಯೋಜನೆಯನ್ನು ನಮ್ಮ ಕರ್ನಾಟಕ ರಾಜ್ಯದ ಕಾರ್ಮಿಕ ಇಲಾಖೆಯಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಈ ವಿದ್ಯಾರ್ಥಿ ವೇತನ ನೀಡಲಾಗುತ್ತಿದ್ದು ಹಾಗಾಗಿ ಕೂಲಿ ಕಾರ್ಮಿಕ ಇಬ್ಬರ ಮಕ್ಕಳಿಗೆ ಈ ಯೋಜನೆ ಅಡಿಯಲ್ಲಿ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು ಆದ್ದರಿಂದ ಬಡ ವಿದ್ಯಾರ್ಥಿಗಳು ಹಾಗೂ ಕೂಲಿ ಕಾರ್ಮಿಕರ ಮಕ್ಕಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು
ಸ್ನೇಹಿತರೆ ನಿಮಗೆ ಸರಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಹಾಗೂ ನಮ್ಮ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳಲ್ಲಿ ಖಾಲಿ ಇರುವಂತೆ ಅನೇಕ ಹುದ್ದೆಗಳ ಬಗ್ಗೆ ಹಾಗೂ ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಅರ್ಜಿ ಸಲ್ಲಿಸುವ ದಿನಾಂಕ ಯಾವಾಗ ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಮತ್ತು ಯಾವ ವರ್ಗದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕವೆಷ್ಟು ಹಾಗೂ ಸಂಬಳ ಎಷ್ಟು ನೀಡುತ್ತಾರೆ ಎಂಬ ಪ್ರತಿಯೊಂದು ಮಾಹಿತಿಯನ್ನು ನಾವು ಪ್ರತಿದಿನ ಒಂದೊಂದು ಲೇಖನಿಯ ಮೂಲಕ ಪ್ರಕಟಣೆ ಮಾಡುತ್ತೇವೆ
ಇಷ್ಟೇ ಅಲ್ಲದೆ ನಮ್ಮ ರಾಜ್ಯದಲ್ಲಿ ನಡೆಯುವಂತ ಪ್ರಮುಖ ಸುದ್ದಿಗಳು ಹಾಗೂ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ಐದು ಗ್ಯಾರಂಟಿ ಯೋಜನೆಗಳು ಈ ಯೋಜನೆಗಳ ಪ್ರತಿಯೊಂದು ಅಪ್ಡೇಟ್ ಪ್ರತಿದಿನ ಪಡೆಯಬೇಕೆ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ರೀತಿ ಸ್ಕಾಲರ್ಶಿಪ್ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದಂತೆ ರೈತ ಯೋಜನೆಗಳು ಹಾಗೂ ನಮ್ಮ ಕರ್ನಾಟಕದ ಪ್ರಚಲಿತ ಘಟನೆಗಳು ಮತ್ತು ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ಹಣಗಳು ಹೇಗೆ ಎಂಬ ಮಾಹಿತಿಯನ್ನು ನಾವು ಪ್ರತಿದಿನ ಪ್ರಕಟಣೆ ಮಾಡುತ್ತೇವೆ ಈ ಮಾಹಿತಿ ನೀವು ಬೇಗ ಪಡೆಯಲು WhatsApp ಗ್ರೂಪಿಗೆ ಹಾಗೂ Telegram ಗ್ರೂಪಿಗೆ ಜಾಯಿನ್ ಆಗಬಹುದು ಇದರಿಂದ ಪ್ರತಿಯೊಂದು ಮಾಹಿತಿ ಬೇಗ ಪಡೆಯುತ್ತೀರಿ
ಲೇಬರ್ ಕಾರ್ಡ್ ಸ್ಕಾಲರ್ಶಿಪ್ (Labour Card Scholarship)..?
ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿರುವಂತ ಕೂಲಿ ಕಾರ್ಮಿಕ ಮಕ್ಕಳಿಗೆ ಹಾಗೂ ಬಡ ಮಕ್ಕಳಿಗೆ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ತಮ್ಮ ಉನ್ನತ ಶಿಕ್ಷಣ ಪಡೆದುಕೊಳ್ಳಲು ಹಾಗೂ ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು ರಾಜ್ಯ ಸರ್ಕಾರ ಕಡೆಯಿಂದ ಈ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅಥವಾ ಕಟ್ಟಡ ಕಾರ್ಮಿಕ ವಿದ್ಯಾರ್ಥಿ ವೇತನವನ್ನು ಜಾರಿಗೆ ತರಲಾಗಿದೆ ಈ ಯೋಜನೆ ಅಡಿಯಲ್ಲಿ ಕೂಲಿ ಕಾರ್ಮಿಕ ಮಕ್ಕಳು ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು
ಹೌದು ಸ್ನೇಹಿತರೆ ಕೂಲಿ ಕಾರ್ಮಿಕರ ಇಬ್ಬರ ಮಕ್ಕಳಿಗೆ ನಮ್ಮ ರಾಜ್ಯದ ಕಾರ್ಮಿಕ ಇಲಾಖೆಯ ಕರ್ನಾಟಕ ಕಟ್ಟಡ ಮತ್ತು ಇತರೆ ಕಾರ್ಮಿಕರ ಕಲ್ಯಾಣ (Labour Card Scholarship) ಇಲಾಖೆಯ ವತಿಯಿಂದ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದ್ದು ಈಗ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಹಾಗಾಗಿ ಆಸಕ್ತಿ ಉಳ್ಳಂತ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಜೊತೆಗೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ 1,1100 ಇಂದ ಸುಮಾರು 20 ಸಾವಿರ ರೂಪಾಯಿ ವರೆಗೆ ಹಣವನ್ನು ಪಡೆದುಕೊಳ್ಳಬಹುದು ಹಾಗಾಗಿ ಪ್ರತಿಯೊಬ್ಬ ಕಾರ್ಮಿಕ ಮಕ್ಕಳು ಈ ಯೋಜನೆಯ ಲಾಭ ಪಡೆದುಕೊಳ್ಳಿ (Labour Card Scholarship)
ಈ ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಇರುವಂತ ಅರ್ಹತೆಗಳು (Labour Card Scholarship)..?
- ಸ್ನೇಹಿತರೆ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಪಡೆಯಲು ಬಯಸುವಂತಹ ವಿದ್ಯಾರ್ಥಿಗಳು ಕಡ್ಡಾಯವಾಗಿ ಕರ್ನಾಟಕ ರಾಜ್ಯ ಸರ್ಕಾರದ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಮಾಡಿಕೊಂಡಿರಬೇಕು ಅಥವಾ ಕಾರ್ಮಿಕ ಕಾರ್ಡನ್ನು ಹೊಂದಿರಬೇಕು ಅಂದರೆ ಮಾತ್ರ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ (Labour Card Scholarship)
- ಈ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಯೋಜನೆಯಲ್ಲಿ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನ ಪಡೆಯಲು ಬಯಸುವಂಥ ವಿದ್ಯಾರ್ಥಿಯು ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು
- ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕುಟುಂಬದ ವಾರ್ಷಿಕ ಆದಾಯ ₹1,25,000 ರೂಪಾಯಿಗಿಂತ ಕಡಿಮೆ ಇರಬೇಕು
- ಈ ವಿದ್ಯಾರ್ಥಿ ವೇತನ ಅಥವಾ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಪಡೆಯುವಂಥ ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಹಿಂದಿನ ತರಗತಿಯಲ್ಲಿ ಶೇಕಡ 50ರಷ್ಟು ಅಥವಾ 50% ಪರ್ಸೆಂಟೇಜ್ ಅಂಕವನ್ನು ಪಡೆದಿರಬೇಕು
- ಈ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಪಡೆಯಲು ಬಯಸುವಂತಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ತಮ್ಮ ಇಂದಿನ ತರಗತಿಯಲ್ಲಿ 45% ರಷ್ಟು ಅಂಕ ಪಡೆದಿರಬೇಕು
- ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಪಡೆಯಲು ಬಯಸುವಂತಹ ವಿದ್ಯಾರ್ಥಿಗಳು ಈ ಯೋಜನೆ ಅಡಿಯಲ್ಲಿ ಒಂದು ಕುಟುಂಬದಲ್ಲಿ ಇಬ್ಬರು ಕಾರ್ಮಿಕ ಮಕ್ಕಳಿಗೆ ಮಾತ್ರ ಈ ಯೋಜನೆ ಅಡಿಯಲ್ಲಿ ವಿದ್ಯಾರ್ಥಿ ವೇತನ ಸಿಗುತ್ತದೆ
ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಮೂಲಕ ಯಾವ ವಿದ್ಯಾರ್ಥಿಗಳಿಗೆ ಎಷ್ಟು (Labour Card Scholarship) ಹಣ ಸಹಾಯ ಸಿಗುತ್ತದೆ..?
1 ರಿಂದ 4ನೇ ತರಗತಿ ವಿದ್ಯಾರ್ಥಿಗಳಿಗೆ:- ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಒಂದನೇ ತರಗತಿಯಿಂದ ನಾಲ್ಕನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಕೂಡ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳಿಗೆ ₹1,100/- ಹಣ ಸಹಾಯ ಸಿಗುತ್ತದೆ (Labour Card Scholarship)
5 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ:- ಸ್ನೇಹಿತರೆ 5 ರಿಂದ 8ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡುತ್ತಿರುವಂತಹ ಕಾರ್ಮಿಕ ಮಕ್ಕಳು ಕೂಡ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಸುಮಾರು ₹1,250/- ಹಣ ಸಹಾಯ ಪಡೆದುಕೊಳ್ಳಬಹುದು ಹಾಗಾಗಿ ಪ್ರತಿಯೊಬ್ಬ ಬಡ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರಯತ್ನ ಮಾಡಿ
9 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ:- ಹೌದು ಸ್ನೇಹಿತರೆ 9ನೇ ತರಗತಿ ಹಾಗೂ 10ನೇ ತರಗತಿ ಓದುತ್ತಿರುವಂತ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಜೊತೆಗೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದರಿಂದ ಈ ವಿದ್ಯಾರ್ಥಿಗಳಿಗೆ ₹6,000/- ಹಣ ಸಿಗುತ್ತದೆ
PUC & ITI, DP, Tech ವಿದ್ಯಾರ್ಥಿಗಳಿಗೆ:- ಹೌದು ಸ್ನೇಹಿತರೆ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹಾಗೂ ಐಟಿಐ ಮತ್ತು ಟೆಕ್ ವಿದ್ಯಾರ್ಥಿಗಳು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು ಜೊತೆಗೆ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳಿಗೆ ತಮ್ಮ ವಿದ್ಯಾಭ್ಯಾಸಕ್ಕಾಗಿ ಸುಮಾರು ₹6,000 ಹಣ ಸಹಾಯ ಸಿಗುತ್ತದೆ
ಪದವಿ ವಿದ್ಯಾರ್ಥಿಗಳಿಗೆ:- ಹೌದು ಸ್ನೇಹಿತರೆ ಯಾವುದೇ ಪದವಿ ಮಾಡುತ್ತಿರುವ ವಿದ್ಯಾರ್ಥಿಗಳು ಅಂದರೆ B.A, B. COM, B.S.C, ಹಾಗೂ ಇತರ ಯಾವುದೇ ಪದವಿ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳಿಗೆ ತಮ್ಮ ವಿದ್ಯಾಭ್ಯಾಸಕ್ಕಾಗಿ ಅಥವಾ ತಮ್ಮ ವ್ಯಾಸಂಗಕ್ಕಾಗಿ ಈ ವಿದ್ಯಾರ್ಥಿ ವೇತನ ಅಡಿಯಲ್ಲಿ ₹10,000 ಹಣ ಸಹಾಯ ಸಿಗುತ್ತದೆ
ಸ್ನಾತಕೋತ್ತರ ಪದವಿಗಳು:- ಹೌದು ಸ್ನೇಹಿತರೆ ಸ್ನಾತಕೋತ್ತರ ಪದವಿಗಳನ್ನು ಮಾಡುತ್ತಿರುವಂತಹ ವಿದ್ಯಾರ್ಥಿಗಳು ಅಥವಾ ಪಿಜಿ ಅಧ್ಯಯನ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಈ ಯೋಜನೆ ಅಡಿಯಲ್ಲಿ ₹12,000/- ಹಣ ಸಹಾಯ ಸಿಗುತ್ತದೆ
ಇಂಜಿನಿಯರಿಂಗ್ & ವೈದ್ಯಕೀಯ ವಿದ್ಯಾರ್ಥಿಗಳಿಗೆ:- ಹೌದು ಸ್ನೇಹಿತರೆ (Labour Card Scholarship) ಇಂಜಿನಿಯರಿಂಗ್ ಮತ್ತು ವೈದ್ಯಕೀಯ ವಿದ್ಯಾಭ್ಯಾಸವನ್ನು ಮಾಡುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಜೊತೆಗೆ ಈ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ಅಥವಾ ಉನ್ನತ ಶಿಕ್ಷಣಕ್ಕಾಗಿ ₹20,000 ಹಣ ಸಹಾಯ ಪಡೆದುಕೊಳ್ಳಬಹುದು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (Labour Card Scholarship)..?
ಲೇಬರ್ ಕಾರ್ಡ್:- ಹೌದು ಸ್ನೇಹಿತರೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳ ಪೋಷಕರು ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಆಗಿರಬೇಕು ಅಥವಾ ಲೇಬರ್ ಕಾರ್ಡ್ ಹೊಂದಿರಬೇಕು ಅಂದರೆ ಮಾತ್ರ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಹಾಗಾಗಿ ಅರ್ಜಿ ಸಲ್ಲಿಸಲು ಪೋಷಕರ ಲೇಬರ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಬೇಕಾಗುತ್ತದೆ
ಜಾತಿ ಮತ್ತು ಆದಾಯ ಪ್ರಮಾಣ ಪತ್ರ:– ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ಅಥವಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ತಮ್ಮ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನೀಡಬೇಕಾಗುತ್ತದೆ
ಪೋಷಕರ ಆಧಾರ್ ಕಾರ್ಡ್:- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ತಮ್ಮ ತಂದೆಯ ಅಥವಾ ತಾಯಿಯ ಆಧಾರ್ ಕಾರ್ಡ್ ನೀಡಬೇಕಾಗುತ್ತದೆ
ವಿದ್ಯಾರ್ಥಿಯ ದಾಖಲಾತಿಗಳು:- ಲೇಬರ್ ಕಾರ್ಡ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ತನ್ನ ಆಧಾರ್ ಕಾರ್ಡ್ ಹಾಗೂ ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್ ಮತ್ತು ವಾಸಸ್ಥಳ ಪ್ರಮಾಣ ಪತ್ರ ಮತ್ತು ವಿದ್ಯಾರ್ಥಿಯ ಮೊಬೈಲ್ ನಂಬರ್, ವಿದ್ಯಾರ್ಥಿಯ ಭಾವಚಿತ್ರ ಹಾಗೂ ವಿದ್ಯಾರ್ಥಿಗೆ ಸಂಬಂಧಿಸಿದ ಇತರ ದಾಖಲಾತಿಗಳನ್ನು ನೀಡಬೇಕು
ಶೈಕ್ಷಣಿಕ ವಿವರ:- ಲೇಬರ್ ಕಾರ್ಡ್ ಸ್ಕಾಲರ್ಷಿಪ್ ಗೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ತಮ್ಮ ಇಂದಿನ ತರಗತಿಯ ಶೈಕ್ಷಣಿಕ ವಿವರ ಅಥವಾ ಮಾರ್ಕ್ಸ್ ಕಾರ್ಡ್ ಹಾಗೂ ತಾವು ಪ್ರವೇಶ ಪಡೆದ ಶಾಲಾ ಕಾಲೇಜುಗಳ ಪ್ರವೇಶ ಪ್ರಮಾಣ ಪತ್ರ ಮತ್ತು ಶಾಲಾ-ಕಾಲೇಜುಗಳಿಗೆ ಸಂಬಂಧಿಸಿದಂತೆ ಅರ್ಜಿ ಶುಲ್ಕ ಹಾಗೂ ಇತರ ದಾಖಲಾತಿಗಳನ್ನು ನೀಡಬೇಕಾಗುತ್ತದೆ
ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸುವುದು ಹೇಗೆ (Labour Card Scholarship)…?
ಸ್ನೇಹಿತರೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಎರಡು ರೀತಿಯಲ್ಲಿ ಅರ್ಜಿ ಸಲ್ಲಿಸಬಹುದು ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ನಿಮ್ಮ ಉನ್ನತ ಶಿಕ್ಷಣಕ್ಕಾಗಿ ಅಥವಾ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ಸಹಾಯ ಪಡೆಯಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ನೇತ್ರ ಮೇಲೆ ಕೊಟ್ಟಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡಿದರೆ ನೀವು ಕಾರ್ಮಿಕ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತದೆ ನಂತರ ನಿಮಗೆ ಅಲ್ಲಿ ವಿದ್ಯಾರ್ಥಿ ವೇತನಕ್ಕೆ ಅಪ್ಲೈ ಮಾಡಲು ಕೇಳುತ್ತದೆ
ನಂತರ ಅದರ ಮೇಲೆ ಕ್ಲಿಕ್ ಮಾಡಿದ ತಕ್ಷಣ ಅಲ್ಲಿ ನೀಡಿದಂತ ಎಲ್ಲಾ ದಾಖಲಾತಿಗಳನ್ನು ಹಾಗೂ ನಿಮ್ಮ ಶೈಕ್ಷಣಿಕ ವಿವರಗಳನ್ನು ಸರಿಯಾಗಿ ನೋಡಿಕೊಂಡು ಅಪ್ಲೋಡ್ ಮಾಡಿ ನಂತರ ಎಲ್ಲಾ ದಾಖಲಾತಿಗಳು ಸರಿ ಇದೆ ಎಂದು ಇನ್ನೊಂದು ಸಲ ಚೆಕ್ ಮಾಡಿಕೊಳ್ಳಿ ನಂತರ ಕೆಳಗಡೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು
ಅಥವಾ
ನಿಮ್ಮ ಹತ್ತಿರದ ಯಾವುದಾದರೂ ಆನ್ ಲೈನ್ ಸೆಂಟರ್ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದಂತ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ.! ಈ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡುವ ಮುನ್ನ ನೀವು ಮೇಲೆ ನೀಡಿದಂತ ಎಲ್ಲಾ (Labour Card Scholarship) ದಾಖಲಾತಿಗಳ ಜೆರಾಕ್ಸ್ ಹಾಗೂ ನಿಮ್ಮ ಇತ್ತೀಚಿನ ಭಾವಚಿತ್ರಗಳನ್ನು ತೆಗೆದುಕೊಂಡು ಈ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ
- ಗ್ರಾಮ್ ಒನ್,
- ಕರ್ನಾಟಕ ಒನ್,
- ಬೆಂಗಳೂರು ಒನ್
- CSC ಕೇಂದ್ರ,
- ಇತರ ಆನ್ಲೈನ್ ಸೆಂಟರ್
ಹೌದು ಸ್ನೇಹಿತರೆ ಮೇಲೆ ನೀಡಿದಂತ ಆನ್ಲೈನ್ ಸೆಂಟರಗಳಿಗೆ ಭೇಟಿ ನೀಡಬೇಕು ನಂತರ ನೀವು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ಎಲ್ಲಾ ದಾಖಲಾತಿಗಳನ್ನು ಆನ್ಲೈನ್ ಸೆಂಟರ್ ನವರಿಗೆ ನೀಡಿ ನಂತರ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬೇಕು ಎಂದು ಅವರಿಗೆ ತಿಳಿಸಿ ನಂತರ ನಿಮಗೆ ಅವರು ಈ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ ನಿಮಗೆ ಅರ್ಜಿ ಸಲ್ಲಿಸಿದ ದಾಖಲಾತಿ ನೀಡುತ್ತಾರೆ ನಂತರ ನಿಮಗೆ ಇದರಲ್ಲಿ ಅಪ್ಲಿಕೇಶನ್ ನಂಬರ್ ಹಾಗೂ ಅರ್ಜಿ ಸಲ್ಲಿಸಿದಂತ ಎಲ್ಲಾ ವಿವರಗಳು ಇರುತ್ತವೆ
ನಂತರ ನೀವು ಈ ಅಪ್ಲಿಕೇಶನ್ ಐಡಿಯಿಂದ ನಿಮ್ಮ ಅರ್ಜಿ ಸ್ಥಿತಿ ಎಲ್ಲಿಗೆ ಬಂದಿದೆ ಹಾಗೂ ಯಾವಾಗ ಹಣ ಜಮಾ ಆಗುತ್ತೆ ಎಂಬ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ತಿಳಿದುಕೊಳ್ಳಲು ಸಹಾಯವಾಗುತ್ತದೆ ಹಾಗಾಗಿ ಅರ್ಜಿ ಸಲ್ಲಿಸಿದ ದಾಖಲಾತಿಯನ್ನು ನಿಮ್ಮ ಬಳಿ ಜೋಪಾನವಾಗಿ ಇಟ್ಟುಕೊಳ್ಳಿ
ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಹಾಗೂ ಇದೇ ರೀತಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಬಿಡುವಂತಹ ವಿವಿಧ ರೀತಿ ಸ್ಕಾಲರ್ಶಿಪ್ ಯೋಜನೆಗಳು ಮತ್ತು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಕಡೆಯಿಂದ ಬರುವಂತ ವಿವಿಧ ರೀತಿ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮತ್ತು ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ಪ್ರತಿಯೊಂದು ಮಾಹಿತಿಯನ್ನು ನೀವು ಬೇಗ ಪಡೆದುಕೊಳ್ಳಬೇಕೆ ಅಥವಾ ನೀವು ಎಲ್ಲಾ ಮಾಹಿತಿಗಳ ಬಗ್ಗೆ ಪ್ರತಿದಿನ ಅಪ್ಡೇಟ್ ಪಡೆದುಕೊಳ್ಳಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು